ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಸಕ್ತ ಸಾಲಿನ ರಾಜ್ಯದ ಬಜೆಟ್ ನಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ಮೇರೆಗೆ ಅನುದಾನ ಒದಗಿಸುವಂತೆ ಆಗ್ರಹಿಸಿ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿ ಆವರಣದವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.
ಪ್ರತಿ ವರ್ಷ ಬೆಳಗಾವಿಯಲ್ಲಿ ಅದ್ದೂರಿ ರಾಜ್ಯೋತ್ಸವದ ಆಚರಣೆಗೆ 2 ಕೋಟಿ ರೂ. ಅನುದಾನ ನೀಡುವ ನಿರ್ಧಾರವನ್ನು ರಾಜ್ಯ ಬಜೆಟ್ ನಲ್ಲಿ ಘೋಷಿಸಬೇಕು. ರಾತ್ರಿವರೆಗೂ ರಾಜ್ಯೋತ್ಸವದ ಮೆರವಣಿಗೆಯ ಸಮಯ ವಿಸ್ತರಿಸಬೇಕು. ಬೆಳಗಾವಿ ವಿಮಾನ ನಿಲ್ದಾಣದಿಂದ ರದ್ದಾಗಿರುವ ಎಲ್ಲ ವಿಮಾನ ಸೇವೆಗಳ ಪುನಾರಂಭಕ್ಕೆ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯಬೇಕು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿ ಸ್ಥಳಾಂತರ ಮಾಡುವ ನಿರ್ಧಾರವನ್ನು ಈ ಬಾರಿಯ ಬಜೆಟ್ ನಲ್ಲಿ ಪ್ರಕಟಿಸಲು ಒತ್ತಾಯಿಸಲಾಗಿದ್ದು, ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಿಗೆ ಒಂದು ಸಾವಿರ ಹೊಸ ಬಸ್ ಗಳನ್ನು ಸರಕಾರ ಖರೀದಿ ಮಾಡಿ ವಿತರಿಸಲು ಮನವಿಯಲ್ಲಿ ಕೋರಲಾಗಿದೆ.
ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಪ್ರತಿ ಜಿಲ್ಲೆಗೆ ತಲಾ 500 ಕೋಟಿ ರೂ. ವಿಶೇಷ ಅನುದಾನ ನೀಡಿ ತಾರತಮ್ಯ ನಿವಾರಿಸಬೇಕು. ಮಹಿಳೆಯರ ಉನ್ನತ ಶಿಕ್ಷಣಕ್ಕಾಗಿ ಸರಕಾರದಿಂದ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಮಹಾದೇವ ತಳವಾರ, ಸುರೇಶ ಗವನ್ನರ, ಗಣೇಶ ರೋಕಡೆ, ರಮೇಶ ಯರಗಣ್ಣವರ ಮತ್ತಿತರರು ಉಪಸ್ಥಿತರಿದ್ದರು.
*ಬಡವರಿಗೆ, ಹಣದುಬ್ಬರ ನಿಯಂತ್ರಣಕ್ಕೆ ಯಾವುದೇ ಕ್ರಮಗಳೂ ಇಲ್ಲ; ಕೇಂದ್ರ ಬಜೆಟ್ ಬಗ್ಗೆ ಖರ್ಗೆ ವಾಗ್ದಾಳಿ*
https://pragati.taskdun.com/union-budget-2023mallikarjuna-khargereaction/
*ಕೇಂದ್ರ ಸರ್ಕಾರದ ಬಜೆಟ್ ಕನ್ನಡಿಯೊಳಗಿನ ಗಂಟು*
https://pragati.taskdun.com/union-budget-2023siddaramaihreaction/
ದೇಶದ ಸರ್ವಾಂಗೀಣ ಪ್ರಗತಿಗೆ ಪೂರಕ ಬಜೆಟ್ ; ಡಾ. ಸೋನಾಲಿ ಸರ್ನೋಬತ್
https://pragati.taskdun.com/supplementary-budget-for-the-overall-progress-of-the-country-dr-sonali-sarnobat/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ