
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬಸ್ ಕಂಡಕ್ಟರ್ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣ ವಿವಿಧ ಆಯಾಮಗಳನ್ನು ಪಡೆಯುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ಬೆಳಗಾವಿಗೆ ಆಗಮಿಸುತ್ತಿದ್ದಾರೆ.
ಮಂಗಳವಾರ ಬೆಳಗಾವಿಗೆ ಆಗಮಿಸುವುದಾಗಿ ನಾರಾಯಣ ಗೌಡ ಟ್ವೀಟ್ ಮಾಡಿದ್ದಾರೆ.
https://x.com/narayanagowdru/status/1893515666931565021?t=G9VdME1l4YaaWBmk6jKkkA&s=08
*ಮಂಗಳವಾರ ಬೆಳಗಾವಿಗೆ ಕರವೇ ರಾಜ್ಯಾಧ್ಯಕ್ಷರಾದ, ನಾಡಸೇನಾನಿ ಟಿ.ಎ.ನಾರಾಯಣಗೌಡರು ಧಾವಿಸಲಿದ್ದಾರೆ. ಎಲ್ಲರೂ ಸಜ್ಜಾಗಿ* ಎಂದು ಅವರು ಎಕ್ಸ್ ಖಾತೆಯಲ್ಲಿ ಹಾಕಿದ್ದಾರೆ.
ಮರಾಠಿ ಬಾಷೆಯಲ್ಲಿ ಮಾತನಾಡಿಲ್ಲ ಎನ್ನುವ ಕಾರಣಕ್ಕೆ ಹಲ್ಲೆ ನಡೆಸಿದ್ದಲ್ಲದೆ ಕಂಡಕ್ಟರ್ ವಿರುದ್ಧವೇ ಪೋಕ್ಸೋ ಪ್ರಕರಣ ದಾಖಲಿಸಿರುವ ಹುನ್ನಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡಿಗರು ತೀವ್ರ ಕಿಡಿಕಾರುತ್ತಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದೆ. ಪೋಕ್ಸೋ ಕೇಸ್ ಹಿಂದಿನ ಉದ್ದೇಶವನ್ನು ಬಯಲು ಮಾಡಬೇಕು. ಪೊಲೀಸರು ಇಡೀ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪುಂಡರನ್ನು ಬಗ್ಗುಬಡಿಯಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದೆ.
ಮಂಗಳವಾರ ನಾರಾಯಣಗೌಡ ಆಗನಿಸುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಉಗ್ರಸ್ವರೂಪ ಪಡೆಯುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ