Kannada NewsKarnataka NewsLatest

*31 ಜಿಲ್ಲೆಗಳಲ್ಲಿ ನಾಳೆ ಕರವೇ ಪ್ರತಿಭಟನೆ: ಹಿಂದಿ ಹೇರಿಕೆ ನಿಲ್ಲಿಸಿ: ನಾರಾಯಣಗೌಡ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಹಿಂದಿ ಹೇರಿಕೆ ಖಂಡಿಸಿ ನಾಳೆ 31 ಜಿಲ್ಲೆಗಳಲ್ಲಿಯೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಗೌಡ, ಹಿಂದಿ ಹೇರಿಕ್ರೆ ಖಂಡಿಸಿ ತಾಜ್ ವೆಸ್ಟೆಂಡ್ ಹೋಟೆಲ್ ಗೆ ನುಗ್ಗಿ ಪ್ರತಿಭಟಿಸಿದ ಕಾರ್ಯಕರ್ತರ ಮೇಲೆ ಕೇಸ್ ಹಾಕಲಾಗಿದೆ. ಅಕ್ರಮ ಪ್ರವೇಶ ಮಾಡಿದ ಆರೋಪದಲ್ಲಿ 41 ಕರವೇ ಕಾರ್ಯಕರ್ತರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಬಲವಂತದ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಕೂಡಲೇ ಕಾರ್ಯಕರ್ತರ ಮೇಲಿನ ಕೇಸ್ ಹಿಂಪಡೆಯಬೇಕು. ಇಲ್ಲವಾದಲ್ಲಿ 78 ಲಕ್ಷ ಕಾರ್ಯಕರ್ತರು ದಂಗೆ ಏಳಬೇಕಾಗುತ್ತದೆ ಹುಷಾರ್. ನಿಮ್ಮ ಜೈಲುಗಳಲ್ಲಿಯೂ ಜಾಗ ಸಾಲುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Home add -Advt

Related Articles

Back to top button