Belagavi NewsBelgaum NewsKannada NewsKarnataka NewsLatest
*ಕರವೇ ಪ್ರವೀಣ ಶೆಟ್ಟಿ ಬಣದಿಂದಲೂ ಮಂಗಳವಾರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮರಾಠಿ ಮಾತನಾಡಲು ಬರುವುದಿಲ್ಲ ಎಂದು ಹೇಳಿದ ಬಸ್ ಕಂಡಕ್ಟರ್ ಮೇಲಿನ ಹಲ್ಲೆ ಖಂಡಿಸಿ ಮತ್ತು ಪೋಕ್ಸೋ ಕೇಸ್ ಹಾಕಿರುವ ಕ್ರಮ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದಿಂದಲೂ ಮಂಗಳವಾರ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಲಿದೆ.
ಕರವೇ ಜಿಲ್ಲಾಧ್ಯಕ್ಷ ಆರ್.ಅಭಿಲಾಶ್ ಈ ವಿಷಯ ತಿಳಿಸಿದ್ದಾರೆ. ಪ್ರವೀಣ ಶೆಟ್ಟಿ ಬೆಳಗಾವಿಗೆ ಆಗಮಿಸಲಿದ್ದು ಅವರ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು. ಸುಳ್ಳು ಪೋಕ್ಸೋ ಕೇಸ್ ದಾಖಲಿಸಿರುವ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಎಂದು ಅವರು ಹೇಳಿದ್ದಾರೆ.
ಕರವೇ ನಾರಾಯಣಗೌಡ ಕೂಡ ಅದೇ ದಿನ ಆಗಮಿಸಲಿದ್ದು, ಅವರು ಕೂಡ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಜೊತೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಕೂಡ ಮಂಗಳವಾರವೇ ಪ್ರತಿಭಟನೆ ಆಯೋಜಿಸಿದ್ದಾರೆ. ಕೇಂದ್ರ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಗೆ ಸಾರಿಗೆ ಸಂಸ್ಥೆ ನೌಕರರು ಮೆರವಣಿಗೆ ನಡೆಸಲಿದ್ದಾರೆ.
ಒಟ್ಟಾರೆ ಮಂಗಳವಾರ ಬೆಳಗಾವಿ ರಣಾಂಗಣವಾಗಲಿದೆ.