Belagavi NewsBelgaum NewsKannada NewsKarnataka NewsNationalPolitics
*ಕೇಂದ್ರದ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟಿಸಿದ ಕರವೇ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೆಳಗಾವಿ ನಗರದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಒತ್ತಾಯಪೂರ್ವಕ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಅದನ್ನು ಖಂಡಿಸಿ ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿದರು.
ಹಿಂದಿಯನ್ನು ರಾಷ್ಟ್ರವ್ಯಾಪ್ತಿ ಪಸರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಇದನ್ನು ಕೈ ಬಿಡಬೇಕು ಕೂಡಲೇ ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿಯನ್ನು ಜಾರಿಗೆ ಒತ್ತಾಯಿಸಿದರು.
ಕರ್ನಾಟಕದಲ್ಲಿ ದ್ವೀಬಾಷಾ ಶಿಕ್ಷಣ ನೀತಿಯನ್ನು ತರಲು ಮುಖ್ಯಮಂತ್ರಿಗಳು ಕೂಡಲೆ ಆದೇಶ ಹೊರಡಿಸಬೇಕು ಸರ್ಕಾರ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ವಿಳಂಬ ಮಾಡಿದರೆ ಕರವೇ ರಾಜ್ಯದಲ್ಲಿ ಉಗ್ರ ಹೋರಾಟ ಮಾಡುವುದಾಗಿ, ಹೋರಾಟ ನಡೆಯುವ ಸಂದರ್ಭದಲ್ಲಿ ಆಗುವ ಅವಘಡಗಳಿಗೆ ರಾಜ್ಯ ಸರ್ಕಾರವೇ ಹೋಣೆಯಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.