Belagavi NewsBelgaum NewsKannada NewsKarnataka NewsPolitics

* ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿ ಆರಂಭಿಸಲು ಆಗ್ರಹಿಸಿ ಕರವೇ ಪ್ರತಿಭಟನೆ*

https://www.facebook.com/share/v/1BTQGdZfEu

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿಗಳನ್ನು ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ವತಿಯಿಂದ ವಿನೂತನ ಪ್ರತಿಭಟನೆಯನ್ನು ನಡೆಸಲಾಯಿತು. ಜಿಲ್ಲಾ ಅಧ್ಯಕ್ಷ ಅಭಿಲಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. 

ಬೆಳಗಾವಿಯಲ್ಲಿ ಐಟಿ-ಬಿಟಿ ಕಂಪನಿಗಳನ್ನು ಆರಂಭಿಸುವಂತೆ ಗುರುವಾರ ಇಂಜಿನಿಯರ್ ಪದವಿ ಪಡೆದು ಆಟೋ ಓಡಿಸುತ್ತಿರುವ ಪದವಿಧರನೊಂದಿಗೆ ಸಮೋಸಾಗಳನ್ನು ಮಾರಾಟ ಮಾಡುವುದರ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಐಟಿ-ಬಿಟಿ ಕಂಪನಿಗಳು ಇರದ ಕಾರಣ ಬೆಳಗಾವಿಯಿಂದ ಸುಮಾರು 20 ಸಾವಿರ ಉದ್ಯೋಗಾಕಾಂಕ್ಷಿಗಳು ನೌಕರಿಗಾಗಿ ಬೆಂಗಳೂರು ಮತ್ತು ಪುಣೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಬೆಳಗಾವಿಯಲ್ಲಿಯೂ ಐಟಿ-ಬಿಟಿ ಕಂಪನಿಗಳನ್ನು ನಿರ್ಮಾಣ ಮಾಡಿದರೆ, ಉದ್ಯೋಗ ಅರಸಿ ಹೋಗುವ ವಿದ್ಯಾರ್ಥಿಗಳಿಗೆ ಮತ್ತು ತಂದೆ -ತಾಯಿಯನ್ನು ಬಿಟ್ಟು ಬದುಕುತ್ತಿರುವ ಮಕ್ಕಳಿಗೆ ಅನುಕೂಲವಾಗುತ್ತದೆ. ಅಲ್ಲದೇ, ಬೆಳಗಾವಿಯೂ ಅಭಿವೃದ್ಧಿಯೂ ಆಗುತ್ತದೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ಪ್ರಾಣ ತ್ಯಾಗಕ್ಕೂ ಸಿದ್ಧವಾಗಿದ್ದು, ಉಗ್ರ ಹೋರಾಟವನ್ನು ನಡೆಸುತ್ತೇವೆ ಎಂದು  ಎಚ್ಚರಿಸಿದರು.

ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಗಲಗಲಿ, ಗುರುಗೌಡ ಪಾಟೀಲ್, ಬಾಳಾಸಾಹೇಬ್ ಉದಗಟ್ಟಿ, ಅರುಣ್ ಪಾಟೀಲ್, ಗಿರಿಜಾ ಜೋಯಲ್, ರಾಜು ಕಲಪತ್ರಿ, ಪ್ರಕಾಶ್ ಹಟ್ಟಿಹೊಳಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button