
ಪ್ರಗತಿವಾಹಿನಿ ಸುದ್ದಿ: ಕಂಡಕ್ಟರ್ ಮೇಲೆ ಎಂಇಎಸ್ ಪುಂಡರಿಂದ ಹಲ್ಲೆ ಪ್ರಕರಣ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಒಂದೆಡೆ ಕರವೇ ನಾರಾಯಣ ಗೌಡ ಬಣದಿಂದ ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೊಂದೆಡೆ ಚನ್ನಮ್ಮ ವೃತ್ತದಲ್ಲಿ ಕರವೇ ಪ್ರವೀಣ್ ಶೆಟಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಎಂಇಎಸ್, ಶಿವಸೇನೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ವೇಳೆ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯತ್ತ ಮೆರವಣಿಗೆ ಸಾಗಿದ್ದ ಕರವೇ ಕಾರ್ಯಕರ್ತರನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ವಾಹನದಲ್ಲಿ ತುಂಬಿ ಕರೆದೊಯ್ದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ