ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ, ಇತರ ಭಾಷೆ ನಾಮಫಲಕಗಳನ್ನು ಧ್ವಂಸ ಮಾಡಿದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಇತರ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಗಿದೆ.
ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ವೇಳೆ ಆಂಗ್ಲ ಭಾಷೆಯ ನಾಮಫಲಕಗಳನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವು ಹೋಟೆಲ್, ಅಂಗಡಿಗಳಿಗೂ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ನಾರಾಯನಗೌಡ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಕೋರ್ಟ್ ನ್ಯಾಯಾಂಗ ಬಂಧನಕ್ಕೆ ವಹಿಸಿದ್ದ ಹಿನ್ನೆಲೆಯಲ್ಲಿ ಜೈಲುಪಾಲಾಗಿದ್ದರು.
ಇದೀಗ ಕರವೇ ನಾರಾಯನಗೌಡ ಹಾಗೂ 33 ಕಾರ್ಯಕರ್ತರಿಗೆ ಜಾಮೀನು ಮಂಜೂರಾಗಿದ್ದು, ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ