Kannada NewsKarnataka NewsLatest

*ಬಿಡುಗಡೆಯಾಗಿ ಹೊರಬರುತ್ತಿದ್ದಂತೆಯೇ ಮತ್ತೆ ಅರೆಸ್ಟ್ ಆದ ಕರವೇ ನಾರಾಯಣಗೌಡ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಜೈಲಿನಿಂದ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆಯೇ ಮತ್ತೆ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

Home add -Advt

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯಿಸಿ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಭಟನೆ, ನಾಮಫಲಕ ದ್ವಂಸ ಪ್ರಕರಣ ಸಂಬಂಧ ಜೈಲು ಸೇರಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಹಾಗೂ 28 ಕಾರ್ಯಕರ್ತರು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಜೈಲಿನಿಂದ ಬಿಡುಗಡೆಯಾಗಿ ಹೊರಬರುತ್ತಿದ್ದಂತೆಯೇ ಕುಮಾರಸ್ವಾಮಿ ಲೇಔಟ್ ಪೊಲೀಸರು ನಾರಾಯಣಗೌಡ ಅವರನ್ನು ಮತ್ತೆ ಬಂಧಿಸಿದ್ದಾರೆ.

ಬಂಧಿಸಿ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. 2017ರಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕರವೇ ನಾರಾಯಣಗೌಡ ಅವರನ್ನು ಮತ್ತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಸಂಬಂಧ ನಾರಾಯಣಗೌಡ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿತ್ತು ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ.


Related Articles

Back to top button