ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರೆದಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ವರುಣಾರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ನಿರಂತರ ಮಳೆಯಾಗುತ್ತಿದ್ದೆ. ಇನ್ನೊಂದೆಡೆ ಉಡುಪಿಯಲ್ಲಿಯೂ ಭಾರಿ ಮಳೆಯಾಗುತ್ತಿದ್ದು, 15ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಕರಾವಳಿ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.
ಕರಾವಳಿಯ ಮೂರು ಜಿಲ್ಲೆಗಳು ಹಾಗೂ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಗದಗ, ಕಲಬುರ್ಗಿ, ಹಾವೇರಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಕೂಡ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ಉತ್ತರ ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ತುಂತುರು ಹಾಗೂ ಸಾಧಾರಣ ಮಳೆಯಾಗುತ್ತಿದೆ. ಇಂದು ಕೂಡ ಈ ಭಾಗದಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಖೆ ತಿಳಿಸಿದೆ.
ಅನಾರೋಗ್ಯ ಎಂದು ಆಸ್ಪತ್ರೆಗೆ ಬಂದ ಯುವತಿಯ ಎರಡೂ ಕಿಡ್ನಿಯನ್ನೇ ತೆಗೆದ ಡಾಕ್ಟರ್
https://pragati.taskdun.com/latest/kidney-removegirldoctorbihar/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ