Latest

ಕರಾವಳಿ ಜಿಲ್ಲೆಗಳಲ್ಲಿ ಇನ್ನಷ್ಟು ಮಳೆ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಜೆಲ್ಲೆಗಳಾದ್ಯಂತ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚೆನೆ ನೀಡಿದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ , ಬೀದರ್, ಗುಲ್ಬರ್ಗ, ಯಾದಗಿರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಹ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Home add -Advt

ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಹಾವೇರಿ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚೆನೆ ಇದೆ.

 

Related Articles

Back to top button