Kannada NewsKarnataka NewsLatest

*ಹೀಟ್ ವೇವ್ ಹಿನ್ನೆಲೆ ಉಷ್ಣಾಘಾತ ಭೀತಿ: ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶುಷ್ಕ ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲಿಯೂ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಹೀಟ್ ಸ್ಟ್ರೋಕ್ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ತಾಪಮಾನ ಹೆಚ್ಚಳವಾಗಲಿದ್ದು, ಉಷ್ಣ ಅಲೆ ಆರಂಭವಾಗಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೀಟ್ ವೇವ್ ಹಿನ್ನೆಲೆಯಲ್ಲಿ ಅಲರ್ಟ್ ಘೋ(ಷಿಸಲಾಗಿದೆ.

Home add -Advt

ಕರಾವಳಿಯಲ್ಲಿಂದು 35 ಡಿಗ್ರಿಗಿಂತಲೂ ಹೆಚ್ಚಿನ ತಾಪಮಾನವಿರಲಿದ್ದು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ.

ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಒಣ ಹವೆಯಿರಲಿದೆ.

ಉಷ್ಣ ಅಲೆ ಹಾಗೂ ಹೀಟ್ ಸ್ಟ್ರೋಕ್ ನಿಂದ ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್,ಕಾಫಿ/ಟೀ ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ ಎಂದು ತಿಳಿಸಿದೆ.

Related Articles

Back to top button