
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಅದರಲ್ಲಿಯೂ ಕರ್ವಾವಳಿ ಜಿಲ್ಲೆಗಳಲ್ಲಿ ಉಷ್ಣ ಗಾಳಿ ಬೀಸುತ್ತಿದ್ದು, ವಿಪತ್ತು ನಿರ್ವಹಣಾ ಪ್ರಾಧಿಕಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಕನ್ನದ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಗಾಳಿ ಅಥವಾ ಉಷ್ಣಗಾಳಿ ಆರಂಭವಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ದಕ್ಷಿಣ ಕನ್ನಡದಲ್ಲಿ ನಿನ್ನೆಯಿಂದ ಬಿಸಿ ಗಾಳಿ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗರಿಷ್ಠ ತಾಪಮಾನದ ಜೊತೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜನರು ಸಾಕಷ್ಟು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಸಾರ್ವಜನಿಕರಿಗೆ ಯಾವುದೇ ತೊಂದರೆಗಳಾದಲ್ಲಿ ತುರ್ತು ಸಹಾಯಕ್ಕಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ (1077) (08382229557)ಕ್ಕೆ ಸಂಪರ್ಕಿಸಬಹುದು.

ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಮಾರ್ಗಸೂಚಿ ಹೀಗಿದೆ :
ಮುನ್ನೆಚ್ಚರಿಕಾ ಕ್ರಮ:
ಬಿಸಿಲ ಝಳ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಬಿಸಿಲಿನಲ್ಲಿ ಓಡಾಡುವುದನ್ನು ತಪ್ಪಿಸಿ
ಹೆಚ್ಚು ನೀರು ಕುಡಿಯಿರಿ
ತಿಳಿಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ
ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಛತ್ರಿ, ಟೋಪಿ, ಪಾದರಕ್ಷೆಗಳನ್ನು ಧರಿಸಿ
ಬಿಸಿಲಿನಲ್ಲಿ ಶ್ರಮದಾಯಕ ಚಟುವಟಿಕೆ ತಪ್ಪಿಸಿ
ಮೂರ್ಛೆ ಅರ್ಥವಾ ಅನಾರೋಗ್ಯ, ಸುಸ್ತು ಎಂದೆನೆಸಿದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ
ಒಆರ್ ಎಸ್, ಲಸ್ಸಿ, ಮಜ್ಜಿಗೆಯನ್ನು ಸೇವಿಸಿ. ದೇಹದಲ್ಲಿ ನೀರಿನ ಅಂಶ ಹೆಚ್ಚಿರುವಂತೆ ಹಾಗೂ ಡಿಹೈಡ್ರೇಟ್ ಆಗದಂತೆ ನೋಡಿಕೊಳ್ಳಿ
ಪ್ರಾಣಿಗಳನ್ನು ನೆರಳಿನಲ್ಲಿ ಇರುವಂತೆ ನೋಡಿಕೊಳ್ಳಿ ಹಾಗೂ ಅವುಗಳಿಗೆ ಸಾಕಷ್ಟು ನೀರಿನ ವ್ಯವಸ್ಥೆ ಮಾಡಿ
ನಿಮ್ಮ ಮನೆಗಳನ್ನು ತಂಪಾಗಿರುವಂತೆ ನೋಡಿಕೊಳ್ಳಿ. ವಾಸವಿರುವ ಕೋಣೆಗಳನ್ನು ತಂಪಾಗಿರಿಸಿ. ಮನೆಗಳಿಗೆ ಪರದೆಗಳು ಅಥವಾ ಸನ್ ಶೇಡ್ ಗಳನ್ನು ಬಳಸಿ ರಾತ್ರಿ ವೇಳೆ ಕಿಟಕಿ ತೆಗೆಯಿರಿ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ