ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಜಿಲ್ಲೆಯಲ್ಲಿ ಹಲವೆಡೆ ಗುಡ್ಡ ಕುಸಿತ, ಭೂಕುಸಿತದಂತಹ ಅವಘಡಗಳು ಸಂಭವಿಸಿದ್ದು, ಜನರು ಕಂಗಾಲಾಗಿದ್ದಾರೆ.
ಜಿಲ್ಲೆಯ ಹೊನ್ನಾವರ ತಾಲೂಕಿನ ವರ್ನಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿದಿದ್ದು, ಭಾರಿ ಪ್ರಮಾಣದ ಮಣ್ಣು, ಕಲ್ಲು ಬಂಡೆಗಳು, ಮರಗಳು ರಸ್ತೆಗೆ ಉರುಳಿವೆ. ಈ ಹಿನ್ನೆಲೆಯಲ್ಲಿ ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.
ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಯಲ್ಲಿ ಮಣ್ಣು ತೆರವಿಗೆ ಮಳೆ ಅಡ್ಡಿಯಾಗಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆಗಳಲ್ಲಿ ಗುಡ್ಡ ಕುಸಿತವುಂತಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ