Kannada NewsKarnataka NewsLatestPolitics

*ಮಾಜಿ ಎಂಎಲ್ ಸಿ, ಡಿ.ಕೆ.ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಮಾಜಿ ಎಂಎಲ್ ಸಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ (60) ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

Home add -Advt

ಕರಿಯಣ್ಣ ಸಂಗಟಿ ಅವರು ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಸಾಮರ್ಥ್ಯದಿಂದ ಅವರು ಜನಮನ್ನಣೆ ಗಳಿಸಿದ್ದರು. ಡಿ.ಕೆ.ಶಿವಕುಮಾರ್ ಅವರಿಗೆ ಆಪ್ತರಾಗಿದ್ದ ಅವರು ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಮೂಲತಃ ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದ ನಿವಾಸಿಯಾಗಿದ್ದ ಕರಿಯಣ್ಣ ಸಂಗಟಿ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ರಾಜಕೀಯ ಮುಖಂಡರು ಕಂಬನಿ ಮಿಡಿದಿದ್ದಾರೆ.


Related Articles

Back to top button