*ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಮಾಜಿ ಶಾಸಕರ ಪುತ್ರ*

ಪ್ರಗತಿವಾಹಿನಿ ಸುದ್ದಿ: ಕಾರ್ಕಳದ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಅವರ ಮಗ ಸುದೀಪ್ ಭಂಡಾರಿ ಎಂಬುವವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಾರ್ಕೂರಿನಲ್ಲಿ ರೈಲಿಗೆ ತಲೆಕೊಟ್ಟು ಸಂದೀಪ್ ಭಂಡಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸುದೀಪ್ ಭಂಡಾರಿ ಹೆಬ್ರಿ ಬಳಿ ವೈನ್ ಶಾಪ್ ನಡೆಸುತ್ತಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. Home add -Advt *BREAKING: ಭ್ರಷ್ಟ … Continue reading *ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಮಾಜಿ ಶಾಸಕರ ಪುತ್ರ*