
ಪ್ರಗತಿವಾಹಿನಿ ಸುದ್ದಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರಶುರಾಮ ಮೂರ್ತಿ ಕೆತ್ತನೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಲ್ಪಿ ಕೃಷ್ಣನಾಯಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ನಕಲಿ ಪರಶುರಾಮ ಮೂರ್ತಿ ನಿರ್ಮಿಸಿದ್ದಾರೆ ಎಂದು ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಲ್ಪಿ ಕೃಷ್ಣನಾಯಕ್ ನನ್ನು ಬಂಧಿಸಲಾಗಿದೆ.
ಬಂಧನ ಭೀತಿಯಲ್ಲಿದ್ದ ಕೃಷ್ಣ ನಾಯಕ್ ಉಡುಪಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಜಾಮೀನು ತಿರಸ್ಕರಿಸಿತ್ತು. ಜಾಮೀನು ತಿರಸ್ಕಾರ ಬೆನ್ನಲ್ಲೇ ಕೃಷ್ಣನಾಯಕ್ ತಲೆಮರೆಸಿಕೊಂಡಿದ್ದರು. ಇದೀಗ ಕಾರ್ಕಳ ಠಾಣೆ ಪೊಲೀಸರು ಕೃಷ್ಣ ನಾಯಕ್ ರನ್ನು ಕೇರಳದಲ್ಲಿ ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ