Latest

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ರೂಪಾಂತರ ವೈರಸ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಜನರು ಹೊರಗೆ ಬಂದರೆ ಕೋವಿಡ್ ನಿಯಮ ಉಲ್ಲಂಘಿಸಿದಂತೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ. ಇಂದಿನಿಂದ 9 ದಿನಗಳ ಕಾಲ ಅಂದರೆ ಜನವರಿ 2 ರವರೆಗೆ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

Home add -Advt

ರಾಜ್ಯದಲ್ಲಿ ಕೂಡ ಕೊರೊನಾ ರೂಪಾಂತರ ವೈರಸ್ ಆತಂಕ ಹೆಚ್ಚಿದ್ದು, ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಬೆನ್ನಲ್ಲೇ ಜನರ ಓಡಾಟ ಹೆಚ್ಚುವುದರಿಂದ ರಾಜ್ಯ ಸರ್ಕಾರ ಮುಂಜಾಗೃತಾ ಕ್ರಮವಾಗಿ ನೈಟ್ ಕರ್ಫ್ಯೂ ಜಾರಿಗೊಳಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ

Related Articles

Back to top button