Election NewsKarnataka News

*ಕರ್ನಾಟಕದ 3 ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ 3 ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಚುನಾವಣೆ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಘೋಷಿಸಿದ್ದಾರೆ.

Home add -Advt

ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

ಮೂವರು ನಾಯಕರು ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ತೆರವಾದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

Related Articles

Back to top button