Kannada NewsKarnataka NewsLatest

*ಭಾರಿ ಮಳೆ ಮುನ್ಸೂಚನೆ;14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡು, ಉತ್ತರ ಒಳನಾಡಿದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ನಾಳೆ ಚಿಕ್ಕಮಗಳೂರು, ಚಾಮರಾಜನಗರ, ಆ.31ರಂದು ಬಳ್ಳಾರಿ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಸೆ.1ರಂದು ರಾಯಚೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


Related Articles

Back to top button