ಪ್ರಗತಿವಾಹಿನಿ ಸುದ್ದಿ: ಬಿಸಿಲ ಝಳದಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ.
ಇಂದಿನಿಂದ ಮೇ 11-ವರೆಗೂ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 10 ಹಾಗೂ 11ರಂದು ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 12 ಬಳಿಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಣ ಬಿಸಿಲ ಹೊಡೆತಕ್ಕೆ ಕಂಗೆಟ್ಟಿದ್ದ ರಾಜ್ಯದಲ್ಲಿ ವರುಣನ ಆಗಮನವಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮೇ 12 ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ