ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ; ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಮುಖ್ಯ ಚುನಾವಣೆ ಆಯುಕ್ತ ರಾಜೀವ ಕುಮಾರ ಮತದಾನ ಮತ್ತು ಚುನಾವಣೆಯ ಇತರ ಪ್ರಕ್ರಿಯೆಗಳ ದಿನಾಂಕವನ್ನು ಪ್ರಕಟಿಸಿದರು.

ಚುನಾವಣೆ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿದೆ. ಮತದಾನ ಮೇ10 ರಂದು ನಡೆಯಲಿದ್ದು, ಮತ ಎಣಿಕೆ ಮೇ.13 ರಂದು ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ.

ಏಪ್ರಿಲ್ 13ರಂದು ಅಧಿಸೂಚನೆ ಪ್ರಕಟ, ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಏಪ್ರಿಲ್ 21 ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೇ ದಿನ ಎಂದು ತಿಳಿಸಿದರು.

ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗುವುದು. ಇದೇ ಮೊದಲ ಬಾರಿ ಕರ್ನಾಟಕದಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದೆ ಎಂದರು.

ಜೇನುಕುರುಬ, ಕಾಡುಕುರುಬ ಮತದಾರರಿಗೆ ಪ್ರತ್ಯೇಕ ಬೂತ್ ವ್ಯವಸ್ಥೆ ಮಾಡಲಾಗುವುದು. ರಾಜ್ಯದಲ್ಲಿ 58,282 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ 34,219 ಮತಗಟ್ಟೆ, ಮಹಿಳಾ ಸಿಬ್ಬಂದಿ ನಿರ್ವಹಿಸುವ ಮತಗಟ್ಟೆ ಸಂಖ್ಯೆ 1,320.

224 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆ ಸ್ಥಾಪನೆ.

ಕರ್ನಾಟಕದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ.
ಪುರುಷ ಮತದಾರರು-2,63,43,561
ಮಹಿಳಾ ಮತದಾರರು-2,59,26,319 ಮತದಾರರಿದ್ದಾರೆ.
ತೃತೀಯಲಿಂಗಿಗಳು 4,699 ಮತದಾರರು
12.15 ಲಕ್ಷ ಯುವ ಮತದಾರರು
80 ವರ್ಷ ಮೇಲ್ಪಟ್ಟವರು 12,15,763
100 ವರ್ಷ ಮೇಲ್ಪಟ್ಟವರು 16,976 ಮತದಾರರು
9,17,241 ಜನರು ಮೊದಲ ಬಾರಿ ಮತದಾನ ಮಾಡಲಿದ್ದಾರೆ

ಅಭ್ಯರ್ಥಿಗಳ ಮಾಹಿತಿ ವೆಬ್ ಸೈಟ್ ನಲ್ಲಿ ಲಭ್ಯ. ಮತದಾರರಲ್ಲಿ ಜಾಗೃತಿ ಮೂಡಿಸಲು ಆಯೋಗದಿಂದ ಕ್ರಮ ಕೈಗೊಳ್ಳಲಾಗಿದೆ. ಚುನಾವಣೆಗಾಗಿ 2400 ವೀಕ್ಷಕರನ್ನು ನೇಮಕ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button