ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನೇನು ಒಂದು ವರ್ಷ ಬಾಕಿ ಇರುವಾಗಲೇ ಅವಧಿಗೂ ಮುನ್ನ ಚುನಾವಣೆ ನಡೆಯುವ ಸಾಧ್ಯತೆ ಬಗ್ಗೆ ಭಾರಿ ಚರ್ಚೆ ನಡೆದಿರುವಾಗಲೇ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರೆ ಎಂಬ ವಿಚಾರ ಕೂಡ ರಾಜಕೀಯ ಚರ್ಚೆಯಲ್ಲಿ ಮುನ್ನೆಲೆಗೆ ಬಂದಿದೆ.
2023ರ ವಿಧಾನಸಭಾ ಚುನಾವಣೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ. ಶಿಗ್ಗಾವಿ ಹಾಗೂ ದಾವಣಗೆರೆ ಉತ್ತರ ಕ್ಷೇತ್ರಗಳಿಂದ ಬೊಮ್ಮಾಯಿ ಸ್ಪರ್ಧಿಸಲಿದ್ದಾರೆ.
ಈ ಬಗ್ಗೆ ಶಾಸಕ ಎಸ್.ಎ.ರವೀಂದ್ರನಾಥ್ ಮಾಹಿತಿ ನೀಡಿದ್ದು, ಸಿಎಂ ಬೊಮ್ಮಾಯಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತಾರೆ ಎಂಬುದು ಬಹುತೇಕ ನಿಶ್ಚಿತ. ಈ ವಿಚಾರವನ್ನು ಸಂಸದ ಜಿ.ಎಂ.ಸಿದ್ದೇಶ್ವರ್ ಅವರಿಂದಲೇ ನನಗೆ ಗೊತ್ತಾಗಿದೆ. ನಮ್ಮ ಕ್ಷೇತ್ರಕ್ಕೆ ಸಿಎಂ ಬಂದರೆ ಅವರನ್ನು ಗೆಲ್ಲಿಸುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಇನ್ನು ಸಿಎಂ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಂಸದ ಸಿದ್ದೇಶ್ವರ್, ಈ ಬಗ್ಗೆ ಮಾತುಕತೆ ನಡೆದಿದೆ. ಜಸ್ಟ್ ವೇಟ್ ಆಂಡ್ ಸಿ… ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತೆ. ದಾವಣಗೆರೆ ಉತ್ತರದಿಂದ ಸಿಎಂ ಸ್ಪರ್ಧೆ ಮಾಡಿದರೆ ಜಿಲ್ಲೆಯ ಅಭಿವೃದ್ಧಿ ಸುಗಮವಾಗಿ ಆಗುತ್ತೆ. ಇಲ್ಲಿಂದ ಸ್ಪರ್ಧಿಸಿದರೆ ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಸಿ.ಎಂ ಇಬ್ರಾಹಿಂ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ