ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ-EVM ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಅದರಿಂದ ಯಾವುದೇ ಅಕ್ರಮ ನಡೆಸಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಗುಜರಾತ್ ನಲ್ಲಿ ಬಳಸಿದ ಇವಿಎಂ ಬಲಶಬಾರದು ಎಂಬ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿದ ಅವರು, ಇವಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾಲ್ಕು ರಾಜ್ಯಗಳಲ್ಲಿ ಇವಿಯಂ ನಿಂದ ಯಾವುದೇ ಸಮಸ್ಯೆಯಾಗಿಲ್ಲ. ಯಾರಿಂದಲೂ ಇವಿಎಂ ದುರುಪಯೋಗ ಮಾಡಲು ಸಾಧ್ಯವಿಲ್ಲ ಎಂದರು. ಇವಿಎಂ ಬಗ್ಗೆ ಹಲವು ಬಾರಿ ಪ್ರಶ್ನೆಗಳು ಬಂದಿವೆ. ಇವಿಎಂ ಎಲ್ಲಿಯೂ ಯಾರಿಂದಲು ದುರುಪಯೋಗ ಮಾಡಲು ಆಗದು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ