Karnataka News

*ಮತ್ತೆ ಹಿಂಗಾರು ಮಳೆ ಚುರುಕು ಮುನ್ಸೂಚನೆ; ಈ ಭಾಗದಲ್ಲಿ ಗುಡುಗು ಸಹಿತ ಮಳೆ*

ಪ್ರಗತಿವಾಹಿನಿ ಸುದ್ದಿ: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಸಾಧ್ಯತೆ ಇದ್ದು, ಕಾಸರಗೋಡು, ಪುತ್ತೂರು, ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 9ರಿಂದ ಒಣಹವೆ ಮುಂದುವರಿಯಲಿದ್ದು, ನವೆಂಬರ್ 13ರಿಂದ ಹಿಂಗಾರು ಚುರುಕಾಗಿ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ನವೆಂಬರ್ 14ರಿಂದ ಹಿಂಗಾರು ಮಳೆ ಚುರುಕಾಗುವ ಲಕ್ಷಣಗಳಿವೆ.

Home add -Advt

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 13ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ಮಳೆ ಪುನರಾರಂಭಗೊಳ್ಳಲಿದೆ.

Related Articles

Back to top button