ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲರು ಭಾಷಣ ಆರಂಭಿಸುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಭಿತ್ತಿಪತ್ರ ಹಿಡಿದು ಪ್ರತಿಭಟಿಸಿದ್ದಾರೆ.
ಕಾಂಗ್ರೆಸ್ ವಿರೋಧದ ನಡುವೆಯೂ ರಾಜ್ಯಪಾಲರು ಜಂಟಿ ಸದನವನ್ನುದ್ದೇಶಿಸಿ ಭಾಷಣ ಮಾಡಿದ್ದು, ಕೊರೊನಾ ವಿರುದ್ಧದ ಹೋರಾಟದಲ್ಲಿ ನಮ್ಮ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ವೈದ್ಯರು, ನರ್ಸ್, ಪೋಲೀಸರು ಸೇರಿದಂತೆ ಎಲ್ಲಾ ಕೊರೊನಾ ವಾರಿಯರ್ಸ್ ಗೆ ಧನ್ಯವಾದಗಳು ಎಂದು ಹೇಳಿದರು.
ದೇಶದಲ್ಲಿಯೇ ಅತಿ ಹೆಚ್ಚು ಕೋವಿಡ್ ಟೆಸ್ಟ್ ನ್ನು ರಾಜ್ಯದಲ್ಲಿ ಮಾಡಲಾಗಿದ್ದು, 80 ಲಕ್ಷಕ್ಕಿಂತ ಹೆಚ್ಚು ಆರ್ ಟಿಪಿಸಿ ಆರ್ ಟೆಸ್ಟ್ ಮಾಡಲಾಗಿದೆ. 1.36 ಲಕ್ಷ ಕೊರೊನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ ಎಂದರು.
ವೈದ್ಯಕೀಯ ಕ್ಷೇತ್ರದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿರುವ ಆಸ್ಪತ್ರೆಗಳ ಅಭಿವೃದ್ಧಿ ಮಾಡಲಾಗಿದೆ. ರಾಜ್ಯ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿ ಮಾಡಿದ್ದು, ಉದ್ಯೋಗ ಸೃಷ್ಟಿ ಪ್ರಮಾಣವೂ ಹೆಚ್ಚುತ್ತಿದೆ. ವಿದ್ಯುತ್ ಉತ್ಪಾದನೆಯಲ್ಲಿ ಅಭಿವೃದ್ಧಿ ಸಾಧಿಸಿದ್ದು, ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ