Latest

ಲೋಕಾಯುಕ್ತ, ಕರ್ನಾಟಕ ವಿವಿ ತಿದ್ದುಪಡಿ ಸೇರಿ ಪ್ರಮುಖ ಮಸೂದೆಗಳ ಮಂಡನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಮಂಡಲ ಅಧಿವೇಶನದ ಎರಡನೇ ದಿನವಾದ ಇಂದು ಲೋಕಾಯುಕ್ತ ಮಸೂದೆ, ಕರ್ನಾಟಕ ವಿವಿ ತಿದ್ದುಪಡಿ ಮಸೂದೆ, ಭೂಸುಧಾರಣಾ ತಿದ್ದುಪಡಿ ವಿಧೇಯಕ, ಸಾಂಕ್ರಾಮಿಕ ರೋಗ ನಿಯಂತ್ರಣ ವಿಧೇಯಕ ಸೇರಿದಂತೆ ಹಲವು ಮಸೂದೆಗಳನ್ನು ರಾಜ್ಯ ಸರ್ಕಾರ ಮಂಡಿಸಿದೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಲೋಕಾಯುಕ್ತ ವಿಧೇಯಕ, ಪಟ್ಟಣ ಗ್ರಾಮಾಂತರ ವಿಧೇಯಕ, ಸಾರ್ವಜನಿಕ ನಾಗರಿಕ ಸೇವೆಗಳ ವಿಧೇಯಕಗಳನ್ನ ಮಂಡಿಸಿದರು. ಇದೇ ವೆಳೆ 2015ನೇ ಸಾಲಿನ ನಗರಪಾಲಿಕೆ ವಿಧೇಯಕವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದರು.

ಸದನದಲ್ಲಿ ಮಂಡನೆಯಾದ ಮಸೂದೆಗಳು:
* ಕರ್ನಾಟಕ ಲೋಕಾಯುಕ್ತ ( ಎರಡನೇ ತಿದ್ದುಪಡಿ) ವಿಧೇಯಕ
* ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ವಿಧೇಯಕ
* ಸಿವಿಲ್ ಸೇವೆಗಳ ವಿಧೇಯಕ
* ಕರ್ನಾಟಕ ಭಿಕ್ಷಾಟನೆ ನಿಷೇಧ ತಿದ್ದುಪಡಿ ವಿಧೇಯಕ
* ಕನ್ನಡ ವಿಶ್ವವಿದ್ಯಾಲಯ ಮತ್ತು ಇತರ ಕೆಲವು ಕಾನೂನುಗಳ ತಿದ್ದುಪಡಿ ವಿಧೇಯಕ
* ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಇತರ ಕಾನೂನು ತಿದ್ದುಪಡಿ ವಿಧೇಯಕ
* 2020 ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ
* 2020 ನೇ ಸಾಲಿನ ಕರ್ನಾಟಕ ವಿಧಾನ ಮಂಡಲ ಸಂಬಳಗಳು ವಿಧೇಯಕ
* 2020 ನೇ ಸಾಲಿನ ಕರ್ನಾಟಕ ಕೈಗಾರಿಕೆಗಳ ಸೌಲಭ್ಯ ತಿದ್ದುಪಡಿ ವಿಧೇಯಕ
* 2020 ನೇ ಸಾಲಿನ ಕರ್ನಾಟಕ ಪೌರಸಭೆಗಳ ತಿದ್ದುಪಡಿ ವಿಧೇಯಕ ಮಂಡನೆ
* 2020 ನೇ ಸಾಲಿನ ಭೂ ಸುಧಾರಣಾ ತಿದ್ದುಪಡಿ ವಿಧೇಯಕ
* ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ
* ರಾಜ್ಯ ಸಾಂಕ್ರಾಮಿಕ ರೋಗಗಳ ವಿಧೇಯಕ
* ಕೈಗಾರಿಕಾ ಸೌಲಭ್ಯಗಳ ತಿದ್ದುಪಡಿ ವಿಧೇಯಕ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button