Uncategorized

*ಕರ್ನಾಟಕ ಲೇಖಕಿಯರ ಸಂಘಕ್ಕೆ 1 ಕೋಟಿ ರೂ. ವಿಶೇಷ ಅನುದಾನಕ್ಕೆ ಸಿಎಂಗೆ ಮನವಿ*

ಅಕಾಡೆಮಿ, ಪ್ರಾಧಿಕಾರ, ನಿಗಮಗಳಲ್ಲಿ ಸಮ ಪ್ರಮಾಣದಲ್ಲಿ ಮಹಿಳಾ ಪ್ರಾತಿನಿಧ್ಯ ನೀಡಬೇಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ಲೇಖಕಿಯರ ಸಂಘದ ಕಾರ್ಯ ಚಟುವಟಿಕೆಗಳಿಗೆ ಒಂದು ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕು ಎಂದು ಸಂಘದ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು.

ಸಂಘದ ಅಧ್ಯಕ್ಷೆ ಹೆಚ್.ಎಲ್.ಪುಷ್ಪ ಅವರ ನೇತೃತ್ವದ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಲವು ಮಹತ್ವದ ಸಂಗತಿಗಳನ್ನು ಚರ್ಚಿಸಿ ತಮ್ಮ ಬೇಡಿಕೆಗಳನ್ನು ಮಂಡಿಸಿತು.

Home add -Advt

ವಿಶೇಷ ಅನುದಾನದ ಜತೆಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅರ್ಹ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು, ‘ನನ್ನ ಕವಿತೆ-ನನ್ನ ಹಾಡು” ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಸೂಚಿಸಬೇಕು ಎನ್ನುವುದೂ ಸೇರಿ ಹಲವು ಹಕ್ಕೊತ್ತಾಯಗಳನ್ನು ಮಂಡಿಸಿದರು.

ನಿಯೋಗದಲ್ಲಿ ವಸುಂಧರಾ ಭೂಪತಿ, ಎಂ.ಎಸ್.ಆಶಾದೇವಿ, ಬಿ.ಟಿ.ಲಲಿತಾನಾಯಕ್ ಸೇರಿ ಹಲವು ಲೇಖಕಿಯರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button