Belagavi NewsKannada NewsKarnataka NewsLatest

ವಿದ್ಯುತ್ ದರ ಏರಿಕೆ ವಿರುದ್ಧ ನಾಳೆ ಕರ್ನಾಟಕ ಬಂದ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರಕಾರ ವಿದ್ಯುತ್ ದರ ಏರಿಸಿರುವುದನ್ನು ಖಂಡಿಸಿ ಬೆಳಗಾವಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಘಟಕಗಳ ವತಿಯಿಂದ ನಾಳೆ (ಜೂ.22) ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ಹೆಸ್ಕಾಂ, ಮೆಸ್ಕಾಂ, ಬೆಸ್ಕಾಂ, ಚೆಸ್ಕಾಂ ಮತ್ತು ಸಿಇಎಸ್ ಸಿ ಯಿಂದ ವಿದ್ಯುತ್ ದರವನ್ನು ಏಕಾಏಕಿ ಹೆಚ್ಚಳ ಮಾಡಲಾಗಿದೆ. ಕೆಇಆರ್ ಸಿ ತನ್ನ ದರಪಟ್ಟಿಯಲ್ಲಿ ಪ್ರತಿ ಯುನಿಟ್ ನ ಬೆಲೆಯನ್ನು ಎಸ್ಕಾಂಗಳು ಕೇಳಿದ್ದಕ್ಕಿಂತ ಅಧಿಕ ಪ್ರಮಾಣದಲ್ಲಿ ಹೆಚ್ಚಳ ಮಾಡಿದೆ. ಎಫ್ ಎಸಿ ಲೆಕ್ಕಾಚಾರ ಮಾಡುವ ವಿಧಾನವನ್ನು ಕೂಡ ಬದಲಾಯಿಸಿದ್ದು ಗ್ಆಹಕರಿಗೆ ದುಪ್ಪಟ್ಟು ಬಿಲ್ ಬಂದಿದೆ.

ಈ ಸಂಬಂಧ ರಾಜ್ಯ ಇಂಧನ ಸಚಿವರು ಸೇರಿದಂತೆ ಎಸ್ಕಾಂಗಳ ಡಿಸಿಗಳು, ಸಂಬಂಧಿಸಿದ ಅಧಿಕಾರಿಗಳಿಗೂ ಭೇಟಿಯಾಗಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಬಂದ್ ಕರೆ ನೀಡಲಾಗಿದೆ ಎಂದು ಬೆಳಗಾವಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (BCCI) ಕಾರ್ಯದರ್ಶಿ ಸ್ವಪ್ನಿಲ್ ಶಾ ತಿಳಿಸಿದ್ದಾರೆ.

ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಎಲ್ಲ ವ್ಯಾಪಾರ ಹಾಗೂ ಕೈಗಾರಿಕೆಗಳನ್ನು ಸ್ಥಗಿತಗೊಳಿಸಿ ಸಹಕರಿಸುವಂತೆ ಕೋರಿರುವ ಅವರು ಗುರುವಾರ ಬೆಳಗ್ಗೆ 10.30ಕ್ಕೆ ಬೆಳಗಾವಿಯ ಧರ್ಮವೀರ ಸಂಭಾಜಿ ಚೌಕ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದ್ದು ಎಲ್ಲ ವಾಣಿಜ್ಯೋದ್ಯಮಿಗಳು ಹಾಗೂ ಕೈಗಾರಿಕೋದ್ಯಮಿಗಳು ಭಾಗವಹಿಸುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button