ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿಗಾಗಿ ನಾಳೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಯಾವುದೇ ರ್ಯಾಲಿ, ಪ್ರತಿಭಟನೆಗಳಿಗೆ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್, ಇಂದು ಮಧ್ಯರಾತ್ರಿ 12 ಗಂಟೆಯಿಂದಲೇ ಬೆಂಗಳೂರಿನಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೆ ಬರಲಿದೆ. ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರ್ಯಾಲಿಗೆ ಅವಕಶವಿಲ್ಲ. ಒಂದೆಡೆ 5 ಜನಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಸಭೆಗಳನ್ನು ನಡೆಸುವಂತಿಲ್ಲ. ಪ್ರತಿಭಟನೆ ಮಾಡುವುದಿದ್ದರೆ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಮಾಡಬಹುದಾಗಿದೆ ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಅಂಗಡಿ, ಮುಂಗಟ್ಟು, ಹೋಟೆಲ್ ಸೇರಿದಂತೆ ಯಾವುದನ್ನು ಬಲವಂತವಾಗಿ ಮುಚ್ಚುವಂತಿಲ್ಲ. ತಾವಾಗಿಯೇ ಬಂದ್ ಮಡಿದರೆ ತೊಂದರೆಯಿಲ್ಲ. ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ನೋಡಡೆದುಕೊಳ್ಳಬೇಕು. ಕಾನೂನು ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಹೆಚ್ಚಿನ ಪೊಲೀಸ್ ಬಂದೀಬಸ್ತ್ ನಿಯೋಜಿಸಲಾಗುತ್ತದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟೆಚ್ಚರಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ