ಪ್ರಗತಿವಾಹಿನಿ ಸುದ್ದಿ; ಬೆಳಗಳಾವಿ: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಕೆಲ ಸಂಘಟನೆಗಳು ಬೆಂಬಲ ಸೂಚಿಸಿಲ್ಲ.
ಬೆಳಗಾವಿ ಜಿಲ್ಲಾ ಕನ್ನಡಪರ ಸಂಘಟನೆಗಳ ಕ್ರಿಯಾ ಸಮಿತಿ, ಬಂದ್ ಬೆಂಬಲಿಸದಿರಲು ನಿರ್ಧರಿಸಿದೆ. ವಾಟಾಳ್ ನಾಗರಾಜ್ ನಿರ್ಧಾರಕ್ಕೆ ಸಮಿತಿ ಅಧ್ಯಕ್ಷ ಅಶೋಕ್ ಚದರಂಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಾಟಾಳ್ ನಾಗರಾಜ್ ಬೆಂಗಳೂರಿನಲ್ಲಿ ಕುಳಿತು ಕರ್ನಾಟಕ ಬಂದ್ ಅಂದ್ರೆ ಹೇಗೆ? ಇದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತೆ. ಕೋವಿಡ್ ನಿಂದ ಜನ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೊಸ ವರ್ಷದ ಸಂದರ್ಭದಲ್ಲಿ ಬಂದ್ ಮಾಡಿದರೆ ವ್ಯಾಪಾರ, ವಹಿವಾಟಿಗೆ ತೊಂದರೆ ಆಗುತ್ತದೆ. ಹಾಗಾಗಿ ನಾವು ಕರ್ನಾಟಕ ಬಂದ್ ನಿರ್ಧಾರ ಒಪ್ಪಲ್ಲ ಎಂದು ಹೇಳಿದ್ದಾರೆ. ಅಲ್ಲದೇ ನಾಳೆ ಈ ನಿಟ್ಟಿನಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ.
ಕರವೇ ಪ್ರವೀಣ್ ಶೆಟ್ಟಿ ಬಣ ಸೇರಿದಂತೆ ಹಲವು ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ