ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿಗಾಗಿ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಾಳೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಾಳೆ ಸೆ.29ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಸೇವೆಗಳು ಸ್ತಬ್ಧಗೊಳ್ಳಲಿವೆ.
ರಾಜ್ಯದ ಜೀವನದಿ ಕಾವೇರಿಗಾಗಿ ಹೋರಾಟ ಹಿನ್ನೆಲೆಯಲ್ಲಿ ನಾಳಿನ ಕರ್ನಾಟಕ ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಓಲಾ- ಊಬರ್ ಕ್ಯಾಬ್ ಚಾಲಕರ ಸಂಘದ ರಾಜ್ಯಾಧ್ಯಕ್ಷ ತನ್ವೀರ್ ಪಾಷಾ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಓಲಾ, ಊಬರ್, ಆಟೋ ಗಳು ರಸ್ತೆಗಿಳಿಯಲ್ಲ ಎಂದು ತಿಳಿಸಿದ್ದಾರೆ.
1 ಲಕ್ಷದ 25 ಸಾವಿರ ಆಟೋಗಳು, 50,000 ಕ್ಯಾಬ್ ಗಲು ಪಾರ್ಕ್ ಆದ ಸ್ಥಳದಿಮ್ದ ಕದಲುವುದಿಲ್ಲ. ನಾಳೆ ಬಂದ್ ನಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.
ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರೈತ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ, ಡಾ.ರಾಜ್ ಕುಮಾರ್ ಅಭಿನಾಗಳ ಸಂಘ, ಸ್ಯಾಂಡಲ್ ವುಡ್ ಚಿತ್ರರಂಗ ಸೇರಿದಂತೆ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6ಗಂಟೆಯವರೆಗೆ ಇಡೀ ಕರ್ನಾಟಕದಾದ್ಯಂತ ಸಂಪೂರ್ಣ ಬಂದ್ ವಾತಾವರಣ ನಿರ್ಮಾಣವಾಗುವುದು ಬಹುತೇಕ ಖಚಿತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ