Latest

ಮರಾಠ ಪ್ರಾಧಿಕಾರಕ್ಕೆ ವಿರೋಧ; ಕರ್ನಾಟಕ ಬಂದ್ ಗೆ ಒಕ್ಕೋರಲ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ ವ್ಯಕ್ತಪಡಿಸಿರುವ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಒಕ್ಕೋರಲ ಕರೆ ನೀಡಿವೆ.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಕರ್ನಾಟಕ ಬಂದ್ ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಯಿತು.

ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಒಗ್ಗಟ್ಟಿನ ನಿರ್ಧಾರ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಾವು ಅವಕಾಶ ನೀಡುವುದಿಲ್ಲ. ಸರ್ಕಾರ ತಕ್ಷಣ ತನ್ನ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

Home add -Advt

Related Articles

Back to top button