Latest

ನಾಳೆ ಸ್ಥಬ್ಧವಾಗುತ್ತಾ ಕರ್ನಾಟಕ; ಏನಿರುತ್ತೆ, ಏನಿರಲ್ಲ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭೂ ಸುಧಾರಣಾ ತಿದ್ದುಪಡಿ ಕಾಯಿದೆ, ಎಪಿಎಂಸಿ ತಿದ್ದುಪಡಿ ಕಾಯಿದೆ ವಿರೋಧಿಸಿ ನಾಳೆ ಸೆ.28ರಂದು ರೈತ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ಥಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ, ರೈತ ಕೃಷಿ ಕಾರ್ಮಿಕರ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಆಶಾ ಜನಶಕ್ತಿ ಸಂಘ ಸೇರಿದಂತೆ 9 ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರೈತ ಸಂಘ, ಹಸಿರು ಸೇನೆ, ದಲಿತ ಸಂಘಟನೆಗಳು, ಓಲಾ-ಉಬರ್ ಚಾಲಕರ ಸಂಘ, ಸಿಐಟಿಯು ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿಸಿದೆ. ರೈತರ ಹೋರಾಟಕ್ಕೆ ಬೀದಿ ಬದಿ ವ್ಯಾಪಾರಿಗಳು ಸಂಪೂರ್ಣ ಬೆಂಬಲ ನೀಡಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಲಿವೆ.

ಆಟೋ-ಟ್ಯಾಕ್ಸಿಗಳು ರಸ್ತೆಗಿಳಿಯುವುದು ಅನುಮಾನವಿದ್ದು, ಖಾಸಗಿ ಬಸ್​ ಸೇವೆ ಬಂದ್ ಆಗಲಿದೆ. ಹಾಗಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6ಗಂಟೆವರೆಗೂ ಕರ್ನಾಟಕ ಸಂಪೂರ್ಣ ಬಂದ್ ಆಗುವ ಸಾಧ್ಯತೆ ದಟ್ಟವಾಗಿದೆ.

ಅಗತ್ಯ ವಸ್ತುಗಳಾದ ಹಾಲು, ಪೇಪರ್, ಹಣ್ಣು, ತರಕಾರಿ ಎಂದಿನಂತೆ ನಾಳೆಯೂ ಇರಲಿದೆ. ಅಗತ್ಯ ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಸೇವೆಗಳು, ಪೆಟ್ರೋಲ್ ಬಂಕ್‌, ಹೊಟೇಲ್, ತೆರೆದಿರುತ್ತದೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಮೆಟ್ರೋ, ವಿಮಾನ, ರೈಲು ಸಂಚಾರ ಎಂದಿನಂತೆ ಇರಲಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button