
ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರಿಂದ ಹಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಉದ್ಧಟತನ ನಡೆಸುತ್ತಿರುವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಲ್ ನಾಗರಾಜ್ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಸಭೆ ನಡೆಸಿದ್ದು, ಸಭೆಯಲ್ಲಿ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಈ ಹಿನ್ನೆಲೆಯಲ್ಲಿ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ನಿರ್ಧರಿಸಲಾಗಿದೆ. ಈ ಬಗ್ಗೆ ಕೆಲವೇ ಕ್ಷಣಗಳಲ್ಲಿ ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ ಮಾಡಲಿದ್ದಾರೆ.