Latest

2 ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು, ಕರ್ನಾಟಕದಲ್ಲಿ?; ಸಚಿವ ಸುರೇಶ್ ಕುಮಾರ್ ಏನಂದ್ರು?

ಪ್ರಗತಿವಾಹಿನಿ ಸುದ್ದಿ; ಉಡುಪಿ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ತಮಿಳುನಾಡು ಹಾಗೂ ತೆಲಂಗಾಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಆದರೆ ರಾಜ್ಯದಲ್ಲಿ ಪರೀಕ್ಷೆಯನ್ನು ರದ್ದು ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಎರಡು ರಾಜ್ಯಗಳಲ್ಲಿ ಪರೀಕ್ಷೆ ರದ್ದು ಮಾಡಿರುವುದರಿಂದ ನಮ್ಮ ರಾಜ್ಯದಲ್ಲೂ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದಾಗುವ ಸಾಧ್ಯತೆಯಿದೆ ಎಂಬ ಮಾತು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವರು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡಲಾಗದು. ಈಗಾಗಲೇ ಪರೀಕ್ಷೆ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದೆ ಎಂದರು.

ಜೂನ್‌ 25ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ದತೆ ನಡೆಸಿಕೊಳ್ಳಿ ಯಾವುದೇ ಗೊಂದಲ ಬೇಡ. ಕೊರೊನಾ ಸೋಂಕು ಹರಡದಂತೆ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಇನ್ನು ಎಲ್ ಕೆಜಿ, ಯು ಕೆಜಿಗೆ ಆನ್ ಲೈನ್ ಶಿಕ್ಷಣ ಒಳಿತಲ್ಲ. ಪ್ರಾಥಮಿಕ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ಒಳಿತಲ್ಲ. ಮಕ್ಕಳ ಮೇಲೆ ಇದು ಕೆಟ್ಟ ಪರಿಣಾಮ ಬೀರುತ್ತದೆ. ನಿನ್ನೆ ನಡೆಸಿದ್ದ ಸಭೆ ಅಪೂರ್ಣವಾಗಿದೆ. ನಾಳೆ ವಿಸ್ತ್ರತ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

Home add -Advt

Related Articles

Back to top button