Film & EntertainmentKannada NewsKarnataka NewsLatest
*ಕರ್ನಾಟಕ ಬಂದ್: ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ನಾಳೆ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿದ್ದು, ಕನ್ನಡ ಚಿತ್ರರಂಗ ಕೂಡ ಬೆಂಬಲ ವ್ಯಕ್ತಪಡಿಸಿದೆ. ಕಾವೇರಿ ನೀರಿಗಾಗಿ ಒತ್ತಾಯಿಸಿ ನಾಳಿನ ಪ್ರತಿಭಟನೆಯಲ್ಲಿ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಭಾಗಿಯಾಗಲಿದ್ದಾರೆ.
ನಟ ಶಿವರಾಜ್ ಕುಮಾರ್ ಭೇಟಿ ಬಳಿಕ ಮಾತನಾಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್, ನಾಳೆ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಶಿವಾನಂದ ಸರ್ಕಲ್ ನ ಗುರುರಾಜ ಕಲ್ಯಾಣ ಮಂಟಪ ಬಳಿ ಪ್ರತಿಭಟನೆ ನಡೆಯಲಿದ್ದು, ಪ್ರತಿಬಟನೆಯಲ್ಲಿ ನಟ ಶಿವರಾಜ್ ಕುಮಾರ್ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಬಂದ್ ಪ್ರತಿಭಟನೆಯಲ್ಲಿ ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ಭಾಗಿಯಾಗಲಿದ್ದಾರೆ. ಕನ್ನಡ ನಾಡಿನ ಜೀವನದಿ ಕಾವೇರಿಗಾಗಿ ನಡೆಸುತ್ತಿರುವ ಹೋರಾಟದಲ್ಲಿ ಕನ್ನಡ ಚಿತ್ರರಂಗ ಸಾಥ್ ನೀಡಲಿದೆ ಎಂದು ತಿಳಿಸಿದ್ದಾರೆ.