ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿಗಾಗಿ ಹೋರಾಟ ಮುಂದುವರೆದಿದ್ದು, ಸೆ.29ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ.
ಕಾವೇರಿ ನೀರಿಗಾಗಿ ಒಂದೇ ವಾರದಲ್ಲಿ ಕೇವಲ ಎರಡು ದಿನಗಳ ಅಂತರದಲ್ಲಿ ರಾಜ್ಯದಲ್ಲಿ ಎರಡು ಬಂದ್ ಗಳಿಗೆ ಕರೆ ನೀಡಲಾಗಿದೆ. ಸೆ.26ರಂದು ನಡೆದ ಬೆಂಗಳೂರು ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ನೀಡಿರಲಿಲ್ಲ. ಆದರೆ ಇದೀಗ ಸೆ.29ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ.
ಸೆ.29ರಂದು ಶುಕ್ರವಾರ ಇಡೀ ರಾಜ್ಯದಲ್ಲಿ ಬಂದ್ ಗೆ ಕರೆ ಕೊಡಲಾಗಿದೆ. ಬಂದ್ ಗೆ ಕನ್ನಡಪರ ಸಂಘಟನೆಗಳು, ಚಲನಚಿತ್ರ ವಾಣಿಜ್ಯ ಮಂಡಳಿ, ಗೂಡ್ಸ್ ವಾಹನ, ಖಾಸಗಿ ವಾಹನ ಮಾಲೀಕರು, ಲಾರಿ ಮಾಲೀಕರು, ಚಾಲಕರು, ಆಟೋ, ಓಲಾ, ಊಬರ್, ಖಾಸಗಿ ಶಾಲೆಗಳು, ಸರ್ಕಾರಿ ನೌಕರರು ಬೆಂಬಲ ಘೋಷಿಸಿದ್ದಾರೆ.
ಸೆ.29ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕಾವೇರಿ ನೀರಿಗಾಗಿ ಒಗ್ಗಟ್ಟಿನ ಹೋರಾಟವಿದು. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದಿಂದ ಹಿಡಿದು, ಉತ್ತರ ಕರ್ನಾಟಕ ಭಾಗದಲ್ಲಿಯೂ ಬಂದ್ ಗೆ ಬೆಂಬಲ ನೀಡಬೇಕು. ಇಡೀ ಕರ್ನಾಟಕೇ ಬಂದ್ ಗೆ ಬೆಂಬಲ ನೀಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.
ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್ ಗೆ, ಕರ್ನಾಟಕ ರಕ್ಷಣಾ ವೇದಿಕೆ, ಅಖಿಲ ಕರ್ನಾಟಕ ರಾಜ್ ಕುಮಾರ್ ಅಭಿಮಾನಿಗಳ ಸಂಘ, , ನಮ್ಮ ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡ ರೈತ ಸಂಘ, , ಕಾರ್ಮಿಕರ ಜಾಗೃತಿ ಸಂಘಟನೆ, ಕುವೆಂಪು ಕಲಾನಿಕೇಅನ, ಕರ್ನಾಟಕ ಜನಪರ ವೇದಿಕೆ, ಕರ್ನಾಟಕ ರಕ್ಷಣಾ ಸ್ವಾಭಿಮಾನ ಬಣ, ಕರ್ನಾಟಕ ಕ್ಯಾಥೋಲಿಕ್ ಕ್ರೈಸ್ತರ ಸಂಘ, ಜನಶಕ್ತಿ ಕೇಂದ್ರ, ಕ.ಸಾ.ಪ ಬೆಂಗಳೂರು, ಕೈಗಾರಿಕಾ ಒಕ್ಕೂಟ, ಜಲಮಂಡಳಿ ಕನ್ನಡ ಸಂಘ, ಕರ್ನಾಟಕ ನವ ನಿರ್ಮಾಣ ಸೇನೆ, ಕಮತ್ ಹೋಟೆಲ್ಸ್, ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಒಕ್ಕೂಟ, ವಿಶ್ವ ಕನ್ನಡ ಸಾಮ್ರಾಜ್ಯ, ರಾಜ್ಯ ಬೇಕರಿ ಕಾಂಡಿಮೆಂಟ್ಸ್ ಸಂಘ ಸೇರಿದಂತೆ 150ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಘೋಷಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ