ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ನಾಳೆ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಪ್ರತಿಭಟನೆ ವಾಪಸ್ ಪಡೆಯಲಾಗಿದೆ ಎಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿತ್ತು. ಆದರೆ ಬಂದ್ ನಿಂದಾಗಿ ರಾಜ್ಯದ ಜನತೆಗೆ ಸಮಸ್ಯೆಯಾಗಲಿದೆ. ಬಂದ್ ವಾಪಸ್ ಪಡೆಯಬೇಕು ಎಂದು ಮುಖ್ಯಮಂತ್ರಿಗಳು ಮಾಡಿದ ಮನವಿ ಮೇರೆಗೆ ಬಂದ್ ಕೈಬಿಡಲಾಗಿದೆ ಎಂದರು.
ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿಷೇಧದ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಅಲ್ಲದೇ ನಾಳೆ ಕರೆ ನೀಡಿದ್ದ ಬಂದ್ ವಾಪಸ್ ಪಡೆಯುವಂತೆ ನನ್ನ ಮೇಲೆ ಇನ್ನಿಲ್ಲದ ಒತ್ತಡ ಹೇರಲಾಗಿದೆ. ಒತ್ತಡಕ್ಕೆ ಮಣಿದು ನಾಳಿನ ಬಂದ್ ಕರೆ ವಾಪಸ್ ಪಡೆಯಲಾಗುತ್ತದೆ. ಎಂಇಎಸ್ ವಿರುದ್ಧ ಕ್ರಮಕ್ಕೆ ಜನವರಿ 21ವರೆಗೆ ಗಡುವು ನೀಡಲಾಗುವುದು ಅಷ್ಟರಲ್ಲಿ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಖಲಿಸ್ತಾನಿ ಉಗ್ರರ ದಾಳಿ ಭೀತಿ; ವಾಣಿಜ್ಯ ನಗರಿಯಲ್ಲಿ ಕಟ್ಟೆಚ್ಚರ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ