
ಕರ್ನಾಟಕ ಬಂದ್
ಪ್ರಗತಿವಾಹಿನಿ ಸುದ್ದಿ: ಕನ್ನಡಪರ ಸಂಘಟನೆಗಳು ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಕನ್ನಡಿಗರ ಮೇಲೆ ಹಲ್ಲೆ ಖಂಡಿಸಿ, ಕನ್ನಡ ಭಾಷೆ, ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಆಗ್ರಹಿಸಿ ಈ ಬಂದ್ ಗೆ ಕರೆ ನೀಡಲಾಗಿದೆ.
ಮಾರ್ಚ್ 22ರಂದು ಶನಿವಾರ ಇಡೀ ಕರ್ನಾಟಕ ಸ್ಥಬ್ದಗೊಳ್ಳುವುದು ಖಚಿತವಾಗಿದೆ. ಕನ್ನಡಪರ ಸಂಘಟನೆ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ. ಅಂಗಡಿ ಮುಂಗಟ್ಟು, ವ್ಯಾಪಾರ-ವಹಿವಾಟು, ವಾಹನ ಸಂಚಾರ ಸೇರಿದಂತೆ ಎಲ್ಲವೂ ಬಹುತೇಕ ಬಂದ್ ಆಗಲಿದೆ. ಮಾರ್ಚ್ 22ರಂದು ಕರ್ನಾಟಕ ಬಂದ್ ದಿನ ಏನಿರುತ್ತೆ ಏನಿರಲ್ಲ? ಎಂಬ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ಮಾಹಿತಿ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಾರ್ಚ್ 22ರಂದು ಅಗತ್ಯ ಸೇವೆ ಹೊರತುಪಡಿಸಿ ಬಹುತೇಕ ಎಲ್ಲಾ ಸೇವೆ ಸ್ಥಗಿತಗೊಳ್ಳಲಿದೆ. ಹಾಲು, ತರಕಾರಿ ಅಂಗಡಿಗಳು, ಆಸ್ಪತ್ರೆ, ಮೆಡಿಕಲ್ ಶಾಪ್ ಗಳು ತೆರೆದಿರಲಿವೆ.
ರೈಲು ಸಂಚಾರ, ವಿಮಾನ ಸೇವೆ ಎಂದಿನಂತೆ ಇರಲಿದೆ. ಆದರೆ ಬೆಂಗಳೂರಿನಲ್ಲಿ ಆಟೋ ಸಂಚಾರ ಇರುವುದಿಲ್ಲ. ಬಸ್ ಸಂಚಾರಕೂಡ ವಿರಳವಾಗುವ ಸಾದ್ಯತೆ ಇದೆ. ಚಿತ್ರಮಂದಿರ, ಚಿತ್ರೀಕರಣ ಸಂಪೂರ್ಣ ಬಂದ್ ಆಗಲಿದೆ. ಹೋಟೆಲ್, ಮಾಲ್ ಗಳು ಬಂದ್ ಆಗುವ ಸಾಧ್ಯತೆ ಇದೆ.