Latest

25 ಸಾವಿರ ಕನ್ನಡಪರ ಕಾರ್ಯಕರ್ತರ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 25 ಸಾವಿರಕ್ಕೂ ಹೆಚ್ಚು ಕನ್ನಡಪರ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ನಡೆಸಿದೆ ಎಂದು ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಟೌನ್ ಹಾಲ್ ಬಳಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆದಿದ್ದು, ಕನ್ನಡಿಗರನ್ನು ಕಡೆಗಣಿಸಿ ಮರಾಠಿಗರಿಗೆ ಮಣೆ ಹಾಕುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಹೆಚ್ಚುತ್ತಿದ್ದಂತೆಯೇ ಪೊಲೀಸರು ವಾಟಾಳ್ ನಾಗರಾಜ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, 25 ಸಾವಿರ ಕನ್ನಡ ಹೋರಾಟಗಾರನ್ನು ಮಫಿಯಲ್ಲಿ ಹೋಗಿ ಪೊಲೀಸರು ರಾತ್ರೋರಾತ್ರಿ ಬಂಧಿಸಿದ್ದಾರೆ. ಈ ಮೂಲಕ ಹೋರಾಟಗಾರರನ್ನು ಸಿಎಂ ಯಡಿಯೂರಪ್ಪ ಹತ್ತಿಕ್ಕುವ ಯತ್ನ ನಡೆಸಿದ್ದಾರೆ. ಯಡಿಯೂರಪ್ಪ ಮರಾಠಾ ಪ್ರಾಧಿಕಾರ ಸ್ಥಾಪಿಸಿ ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ ಇದರಿಂದ ನಮಗೆ ನೋವಾಗಿದೆ ಎಂದು ಕಿಡಿಕಾರಿದರು.

ಈ ನಡುವೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿದಂತೆ ಹಲವರನ್ನು ಪೊಲೀಸರು ತಡೆದು ಬಂಧಿಸಿದ್ದಾರೆ.

Home add -Advt

Related Articles

Back to top button