Kannada NewsKarnataka NewsLatest

*ಜೋಕಾಲಿ ಆಡುತ್ತಿದ್ದಾಗ ದುರಂತ: ಕುಣಿಕೆ ಬಿಗಿದು ಬಾಲಕಿ ಸಾವು*

ಪ್ರಗತಿವಾಹಿನಿ ಸುದ್ದಿ: ಜೋಕಾಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಈ ಘಟನೆ ನಡೆದಿದೆ. 9 ವರ್ಷದ ಪ್ರಣಮ್ಯ ಮೃತ ಬಾಲಕಿ. ಮೃತ ಬಾಲಕಿಯನ್ನು ಶಿವಮೊಗ್ಗ ನಗರದ ವಿದ್ಯಾನಗರ ನಿವಾಸಿ ಎಂದು ಗುರುತಿಸಲಾಗಿದೆ.

ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಪ್ರಣಮ್ಯ ತನ್ನ ಚಿಕ್ಕಮ್ಮನ ಮನೆ ಲಕ್ಕಿನಕೊಪ್ಪಕ್ಕೆ ಬಂದಿದ್ದಳು. ಚಿಕ್ಕಮ್ಮನ ಮಕ್ಕಳು ಕೀಟಲೆ ಕೊಡುತ್ತಿದ್ದ ಕಾರಣ ಪ್ರಣಮ್ಯ ಒಬ್ಬಳೇ ಕೋಣೆಯಲ್ಲಿ ಬಾಗಿಲು ಹಾಕಿಕೊಂಡು ಪಂಚೆ ಬಳಸಿ ಜೋಕಾಲಿ ಮಾಡಿಕೊಂಡು ಆಟವಾಡುತ್ತಿದ್ದಳು. ಈ ವೇಳೆ ಜೋಕಾಲಿ ಕುಣಿಕೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವನ್ನಪ್ಪಿದ್ದಾಳೆ.

ಆಟವಾಡುವ ಸಂದರ್ಭದಲ್ಲಿ ಪಂಚೆಯ ಕುಣಿಕೆ ಕುತ್ತಿಗೆಗೆ ಬಿಗಿದುಕೊಂಡ ಪರಿಣಾಮ ಉಸಿರಾಟಕ್ಕೆ ಅಡಚಣೆ ಉಂಟಾಗಿ ಪ್ರಣಮ್ಯ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ. ಕುಟುಂಬದವರು ಬಾಗಿಲು ತೆರೆಯುವಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಳು.

ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಯ ಸುತ್ತಮುತ್ತಿನ ಪರಿಸ್ಥಿತಿಗಳನ್ನು ಪರಿಶೀಲಿಸುತ್ತಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button