*ಕೆಎಲ್ಇ ಸಂಸ್ಥೆಗೆ ಹೊಸ ಅಂಬ್ಯುಲನ್ಸ್ ನೀಡಿದ ಕರ್ನಾಟಕ ಬ್ಯಾಂಕ್* *ಜನಸೇವೆಗೆ ಅರ್ಪಿಸಿದ ಡಾ.ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರಕ್ಕೆ ಕರ್ನಾಟಕ ಬ್ಯಾಂಕ್ ಸಾಮಾಜಿಕ ಬದ್ದತಾ ಯೋಜನೆಯಡಿ ನೂತನ ಅಂಬ್ಯುಲನ್ಸಗಳನ್ನು ನೀಡಿದ್ದು, ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರಿಂದಿಲ್ಲಿ ಜನಸೇವೆಗೆ ಅರ್ಪಿಸಿದರು.
ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರ ತುರ್ತು ಆರೋಗ್ಯ ಸೇವೆಯನ್ನು ಕಲ್ಪಿಸುವಲ್ಲಿ ಅಂಬ್ಯುಲನ್ಸ ಪಾತ್ರ ಅತ್ಯಂತ ಮುಖ್ಯವಾಗಿದ್ದು, ಸುವರ್ಣ ಘಳಿಗೆಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕಾರ್ಯದಲ್ಲಿ ತೊಡಗಿಕೊಂಡಿದೆ.
ಆದ್ದರಿಂದ ತುರ್ತು ಸಂದರ್ಭಗಳಲ್ಲಿ ಅನುಕೂಲವಾಗುವಂತೆ ಸಂಘಸಂಸ್ಥೆಗಳು ಕೈಜೋಡಿಸುವಂತೆ ಕರೆ ನೀಡಿದ ಅವರು, ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ಒಂದೇ ಸೂರಿನಡಿ ಸಕಲ ಆರೋಗ್ಯ ಸೇವೆಯನ್ನು ಕಲ್ಪಿಸಲಾಗುತ್ತಿದೆ. ಕ್ಯಾನ್ಸರ್ ಆಸ್ಪತ್ರೆಯನ್ನೂ ಕೂಡ ಜನಸೇವೆಗೆ ಅರ್ಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾಹೆರನ ಉಪಕುಲಪತಿ ಡಾ. ನಿತಿನ ಗಂಗಾನೆ, ಡಾ. ವಿ ಡಿ ಪಾಟೀಲ, ರಜಿಸ್ಟ್ರಾರ ಎಸ್ ಎಸ್ ಗಣಾಚಾರಿ, ಜೆಎನ್ಎಂಸಿ ಪ್ರಾಚಾರ್ಯರಾದ ಡಾ. ಎನ್ ಎಸ್ ಮಹಾಂತಶೆಟ್ಟಿ, ಉಪಪ್ರಾಚಾರ್ಯರಾದ ಡಾ. ವಿಶ್ವನಾಥ ಪಟ್ಟಣಶೆಟ್ಟಿ, ಡಾ. ಆರಿಫ್ ಮಾಲ್ದಾರ, ಕೆಎಲ್‌ಇ ಸಂಸ್ಥೆಯ ಬ್ಯಾಂಕಿಂಗ್ ವ್ಯವಹಾರಗಳ ನಿರ್ದೇಶಕರಾದ ಬಸವರಾಜ ಜೇವರಗಿಕರ, ಕರ್ನಾಟಕ ಬ್ಯಾಂಕನ ಪ್ರಾದೇಶಿಕ ಮುಖ್ಯಸ್ಥರಾದ ವಿಶ್ವನಾಥ ಎಸ್ ಆರ್, ಹಿರಿಯ ನಿರ್ವಾಹಕರಾದ ಪ್ರಸನ್ನಾ ಪಾವಸ್ಕರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.