Latest

ಕರ್ನಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಅನಂತ ಕೃಷ್ಣ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕರ್ನಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಅನಂತ ಕೃಷ್ಣ ವಯೋಸಹಜ ಕಾಯಿಲೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಬಂಟ್ವಾಳ ಆಲೂಕಿನ ಸಜಿಪ ಗ್ರಾಮದವರಾದ ಅನಂತ ಕೃಷ್ಣ 9 ವರ್ಷಗಳ ಕಾಲ ಕರ್ನಾಟಕ ಬ್ಯಾಂಕ್ ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕರ್ನಾಟಕ ಬ್ಯಾಂಕ್ ನಲ್ಲಿ ಸಾಮಾನ್ಯ ಉದ್ಯೋಗಿಯಾಗಿ ಸೇರಿ ಕಠಿಣ ಪರಿಶ್ರಮದಿಂದ ಬ್ಯಾಂಕ್ ನ ಚೇರ್ ಮನ್ ಹುದ್ದೆ ಏರಿದವರಲ್ಲಿ ಅನಂತ ಕೃಷ್ಣ ಮೊದಲಿಗರು.

ಅನಾರೋಗ್ಯದಿಂದ ಬಳಲುತ್ತಿದ್ದ ಅನಂತ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Related Articles

Back to top button