
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಇನ್ನು ಕೆಲ ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿಇದೆ.
ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಮಳೆಯ ಅಬ್ಬರ ಜೋರಾಗಿದೆ. ಇದೇ ವೇಳೆ ಬೆಂಗಳೂರು ಹಾಗೂ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಪ್ರಮಾಣದ ಮಳೆ ಅಬ್ಬರಿಸಲಿದೆ.