Karnataka News

*23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ: ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಅರಂಭಕ್ಕೂ ಮೊದಲೇ ಮಳೆ ಚುರುಕುಗೊಂಡಿದೆ. ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಹವಾಮಾನ ಇಲಾಖೆ 23 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಿದೆ.

Home add -Advt

ಮೇ 17ರಿಂದ ಬೆಂಗಳೂರು ಸೇರಿದಂತೆ 23 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳುರು,ತುಮಕೂರು, ದಾವಣಗೆರೆ, ವಿಜಯಪುರ, ಯಾದಗಿರಿ, ಕಲಬುರಗಿ, ಗದಗ, ಹಾವೇರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

Related Articles

Back to top button