Karnataka NewsLatestPolitics

*ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ರಾಜೀನಾಮೆ ನೀಡಿದ್ದಾರೆ.

ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್​, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು, ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಿಂಗರಾಜ ಪಾಟೀಲ್, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ನನ್ನನ್ನು ಕಡೆಗಣಿಸಿ ಎಸ್.ವಿ.ಸಂಕನೂರು ಅವರಿಗೆ ಟಿಕೆಟ್ ನೀಡಿದ್ದರಿಂದ ನೋವಾಗಿದೆ. ಹೀಗಾಗಿ, ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸಿ ಎಂದು ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button