Latest

ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಶೀಘ್ರದಲ್ಲಿ ಸಂಪುಟ ವಿಸ್ತರಣೆ ಎಂದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶೀಘ್ರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತಿದ್ದು, ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪನವರ ಪರಮಾಧಿಕಾರಕ್ಕೆ ಬಿಟ್ಟದ್ದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅರುಣ್ ಸಿಂಗ್, ನಾಯಕತ್ವ ಬದಲಾವಣೆ ಬಗ್ಗೆ ನಾವು ನಿರ್ಧರಿಸುತ್ತೇವೆ. ಈ ಬಗ್ಗೆ ಮಾತನಾಡಲು ಯತ್ನಾಳ್ ಯಾರು? ಏನಾದರೂ ಸಮಸ್ಯೆಯಿದ್ದರೆ ಪಕ್ಷದಲ್ಲಿ ಚರ್ಚಿಸಬೇಕು. ಹಲವು ಬಾರಿ ಹೇಳಿದರೂ ಮತ್ಯಾಕೆ ನಾಯಕತ್ವದ ಬಗ್ಗೆ ಪ್ರಶ್ನೆ ಬರುತ್ತದೆ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ ಎಂದು ಹೇಳಿದ್ದಾರೆ.

ಮುಂದೆ ಸ್ವಂತ ಬಲದಿಂದ ಬಿಜೆಪಿ ಅಧಿಕಾರಕ್ಕೆ ಬರಬೇಕಿದೆ. ಬೂತ್ ಮಟ್ಟದಿಂದ ಪಕ್ಷ ಬಲಪಡಿಸಬೇಕಿದೆ. ರಾಜ್ಯದಲ್ಲಿ ನಮ್ಮ ಸರ್ಕಾರ ಅತ್ಯುತ್ತಮ ಕೆಲಸಗಳನ್ನು ಮಾಡುತ್ತಿದೆ. ಕಾಂಗ್ರೆಸ್-ಜೆಡಿಎಸ್ ವಿರೋಧ ಮಾಡಿದರೂ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತಂದಿರುವುದು ಒಳ್ಳೆಯ ಬೆಳವಣಿಗೆ ಎಂದರು.

 

Home add -Advt

Related Articles

Back to top button