Latest

*ಕನ್ನಡ ಮಾದ್ಯಮ ಮಕ್ಕಳಿಗೆ ಹಳ್ಳಿ ಮುತ್ತು ಯೋಜನೆ ಜಾರಿ; ಸರ್ಕಾರವೇ ಭರಿಸಲಿದೆ ವಿದ್ಯಾರ್ಥಿಗಳ ವೃತ್ತಿಪರ ಶಿಕ್ಷಣದ ಶುಲ್ಕ*

 

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ ಜಾರಿಗೊಳಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ಬಜೆಟ್ ಭಾಷಣದಲ್ಲಿ ಗ್ರಾಮೀಣ ಭಾಗದ ಸರ್ಕಾರಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಈ ಯೋಜನೆ ಜಾರಿಗೊಳಿಸಲಾಗುವುದು. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ 500 ಅತ್ಯುತ್ತಮ ವಿದ್ಯಾರ್ಥಿಗಳ ಹೆಚ್ಚಿನ ಶಿಕ್ಷಣಕ್ಕೆ ಒತ್ತು ನೀಡಲಾಗುವುದು. ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೆರವು ಸಿಗಲಿದೆ.

ವಿದ್ಯಾರ್ಥಿಗಳ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕರವೇ ಭರಿಸಲಿದೆ ಎಂದು ಘೋಷಿಸಿದ್ದಾರೆ.

Home add -Advt

*ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ; ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ*

https://pragati.taskdun.com/karnataka-buidget-2023cm-basavaraj-bommaividhanasoudha-4/

 

Related Articles

Back to top button