
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನಸಭೆ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಆರಂಭಿಸಿದ್ದಾರೆ.
ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರನ್ನು ಸ್ಪೀಕರ್ ಯು.ಟಿ.ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹೂಗುಚ್ಛ ನೀಡಿ ಸ್ವಾಗತಿಸಿದರು.

ಬಳಿಕ ವಿಧಾನಸಭೆಯಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದು, ಸರ್ಕಾರದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸರ್ಕಾರ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದ ಆಯವ್ಯಯ ವೃದ್ಧಿಯಾಗುತ್ತಿದೆ. ಉತ್ತಮ ಮಳೆ ಬಂದಿದ್ದರಿಂದ ಉತ್ತಮ ಫಸಲು ಬಂದಿದೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ದಿವಾಳಿಯಾಗುತ್ತದೆ ಎಂದು ಆರೋಪಿಸಲಾಗಿತ್ತು. ಆದರೆ ಅದು ಸುಳ್ಳು ಎಂಬುದನ್ನು ರಾಜ್ಯ ಸರ್ಕಾರ ಸಾಬೀತು ಮಾಡಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದೆ. ಅಭಿವೃದ್ದಿ ಕೆಲಸಗಳು ವೇಗವಾಗಿ ಸಾಗುತ್ತಿದೆ ಎಂದು ರಾಜ್ಯಪಾಲರು ತಿಳಿಸಿದರು.
ಇಂದಿನಿಂದ ಮಾರ್ಚ್ 21ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ